Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: PUC
Published by: Bhagya R K | Date:16 ಅಕ್ಟೋಬರ್ 2023
not found

ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೇನೆಯಲ್ಲಿ ಖಾಲಿ ಇರುವ90 ಟೆಕ್ನಿಕಲ್ ಎಂಟ್ರಿ ಸ್ಕೀಮ್ - 51 ರ ಅಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12 ನವೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು 4 ವರ್ಷ ಅವಧಿಗೆ ತರಬೇತಿ ನೀಡಲು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.  

No. of posts:  90
Application Start Date:  16 ಅಕ್ಟೋಬರ್ 2023
Application End Date:  12 ನವೆಂಬರ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ  ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 16½ ವರ್ಷಕ್ಕಿಂತ ಕಡಿಮೆ ಮತ್ತು ಗರಿಷ್ಠ 19½ ವರ್ಷಕ್ಕಿಂತ ಮೇಲ್ಪಟ್ಟಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 56,100/- ರೂ ಗಳಿಂದ 2,50,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

To Download the official notification

Comments