ಭಾರತೀಯ ಕರಾವಳಿ ಪಡೆಯಲ್ಲಿ ಒಟ್ಟು 50 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಕರಾವಳಿ ಪಡೆಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
1) ಜೆನೆರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಪದವಿ ಹೊಂದಿರಬೇಕು.
2) ಕಮರ್ಷಿಯಲ್ ಪೈಲರ್ ಎಂಟ್ರಿ (ಸಿಪಿಎಲ್-ಎಸ್‌ಎಸ್‌ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿ.ಯು.ಸಿ ಪಾಸ್ ಮಾಡಿರಬೇಕು.
3) ಟೆಕ್ನಿಕಲ್ (ಇಂಜಿನಿಯರಿಂಗ್ ಮತ್ತು ಇಲೆಕ್ಟ್ರಿಕಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.E ಪದವಿ ಹೊಂದಿರಬೇಕು.
ಭಾರತೀಯ ಕರಾವಳಿ ಪಡೆಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯನ್ನು ನಿಗದಿಪಡಿಸಿದೆ.
1) ಜೆನೆರಲ್ ಡ್ಯೂಟಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಿನಾಂಕ 01-07-1997 ರಿಂದ 30-06-2001 ರ ನಡುವೆ ಜನಿಸಿರಬೇಕು.
2) ಕಮರ್ಷಿಯಲ್ ಪೈಲಟ್ ಎಂಟ್ರಿ (ಸಿಪಿಎಲ್-ಎಸ್‌ಎಸ್‌ಎ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-07-1997 ರಿಂದ 30-06-2003 ರ ನಡುವೆ ಜನಿಸಿರಬೇಕು.
3) ಟೆಕ್ನಿಕಲ್ (ಇಂಜಿನಿಯರಿಂಗ್ ಮತ್ತು ಇಲೆಕ್ಟ್ರಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ದಿನಾಂಕ 01-07-1997 ರಿಂದ 30-06-2001 ರ ನಡುವೆ ಜನಿಸಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments