ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 260 ನಾವಿಕ್ (ಜನರಲ್ ಡ್ಯೂಟಿ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/ ಫೆಬ್ರುವರಿ /2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 260
- ಉತ್ತರ - 79
- ಪಶ್ಚಿಮ - 66
- ಈಶಾನ್ಯ - 68
- ಪೂರ್ವ - 33
- ವಾಯುವ್ಯ - 12
- ಅಂಡಮಾನ್ ಮತ್ತು ನಿಕೋಬಾರ್ - 03
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ PUC ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 300/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC / ST ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 22 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments