ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:22 ಜುಲೈ 2023

ಭಾರತೀಯ ವಿಜ್ಞಾನ ಸಂಸ್ಥೆ (IISC) ಬೆಂಗಳೂರು ಇಲ್ಲಿ ಖಾಲಿ ಇರುವ 4 ಸಿವಿಲ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್, ಸಿವಿಲ್ ಸೈಟ್ ಇಂಜಿನಿಯರ್ ಮತ್ತು ಎಲೆಕ್ಟ್ರಿಕ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 13/08/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 4
ಸಿವಿಲ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್ : 1
ಸಿವಿಲ್ ಸೈಟ್ ಇಂಜಿನಿಯರ್ : 1
ಎಲೆಕ್ಟ್ರಿಕ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್ : 2
No. of posts: 4
Application Start Date: 22 ಜುಲೈ 2023
Application End Date: 13 ಆಗಸ್ಟ್ 2023
Work Location: ಬೆಂಗಳೂರು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.Tech/ BE with minimum 60% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600 - 39,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments