ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ವಿಜ್ಞಾನ ಸಂಸ್ಥೆ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)) ಬೆಂಗಳೂರು ಇಲ್ಲಿ ಖಾಲಿ ಇರುವ 13 ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವ್ಯಾಪಾರ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 06 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂಗಳವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments