ಭಾರತೀಯ ನೌಕಾಪಡೆ (Indian Navy) ಯಲ್ಲಿ ಸೇವೆ ಸಲ್ಲಿಸಲು ಆಸಕ್ತರಾದ ಅಭ್ಯರ್ಥಿಗಳಿಗಾಗಿ ಸುವರ್ಣಾವಕಾಶ | 1315 ಹುದ್ದೆಗಳ ನೇಮಕಾತಿ

ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಹೊಸ ಅವಕಾಶ ಬಂದಿದೆ - ಒಟ್ಟು 1315 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಇದು ಕೇವಲ ಉದ್ಯೋಗವಲ್ಲ - ದೇಶಸೇವೆಯ ಜೊತೆಗೆ ಉತ್ತಮ ವೃತ್ತಿಜೀವನಕ್ಕೆ ಮೊದಲ ಹೆಜ್ಜೆಯಾಗಿದೆ. ಆದರೆ ಅರ್ಜಿ ಸಲ್ಲಿಸಲು ಕೇವಲ ಕೆಲವೇ ದಿನಗಳು ಉಳಿದಿವೆ.
⚡ಕೇಂದ್ರ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸಿಹಿ ಸುದ್ದಿಯಾಗಿದೆ. ಹೌದು ಭಾರತೀಯ ನೌಕಾಪಡೆಯಿಂದ 2025ನೇ ಸಾಲಿನ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಇದು ಭದ್ರ ಭವಿಷ್ಯಕ್ಕೆ ಒಂದು ದಾರಿ. ಉತ್ಸಾಹಿ ಮತ್ತು ಅರ್ಹ ಭಾರತದ ಅಭ್ಯರ್ಥಿಗಳಿಂದ ಮಾತ್ರ ಅರ್ಜಿಯನ್ನು ಆಹ್ವಾನಿಸಲಾಗಿದೆ, ಅಭ್ಯರ್ಥಿಗಳು 2025ರ ಸೆಪ್ಟೆಂಬರ್ 3ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಭಾರತೀಯ ನೌಕಾಪಡೆಯ ಅಧಿಸೂಚನೆಯಡಿಯಲ್ಲಿ ಟ್ರೇಡ್ಸ್‌ಮನ್ ಸ್ಕಿಲ್ಲ್ಡ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 1315 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಿದೆ. ಇದು ನಿಮ್ಮ ಸರ್ಕಾರ ಉದ್ಯೋಗದ ಕನಸು ಸಾಕಾರಗೊಳಿಸಬಹುದಾದ ಸನ್ನಿವೇಶವಾಗಿದೆ.
ಈ ನೇಮಕಾತಿಯ ವೇತನ ಪ್ಯಾಕೇಜ್ ಆಕರ್ಷಕವಾಗಿದ್ದುಇದರ ಜೊತೆಗೆ ಪ್ರಯಾಣ ಭತ್ಯೆ, ವಸತಿ ಸೌಲಭ್ಯ ಮತ್ತು ವೈದ್ಯಕೀಯ ಸೌಲಭ್ಯಗಳು ಇರಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025ರ ಸೆಪ್ಟೆಂಬರ್ 3ರೊಳಗೆ ಅಧಿಕೃತ ವೆಬ್‌ಸೈಟ್ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
📌 ಹುದ್ದೆಗಳ ವಿವರ:
🏛️ಸಂಸ್ಥೆ ಹೆಸರು: ಭಾರತೀಯ ನೌಕಾಪಡೆ (Indian Navy)
👨💼ಹುದ್ದೆ ಹೆಸರು: ಟ್ರೇಡ್ಸ್‌ಮನ್ ಸ್ಕಿಲ್ಲ್ಡ್ ಅಪ್ರೆಂಟಿಸ್
🧾 ಒಟ್ಟು ಹುದ್ದೆಗಳ ಸಂಖ್ಯೆ: 1315
📍 ಉದ್ಯೋಗ ಸ್ಥಳ: ಅಖಿಲ ಭಾರತ
💰 ವೇತನ ಶ್ರೇಣಿ :
ಅಭ್ಯರ್ಥಿಗಳಿಗೆ ₹19,900 ರಿಂದ ₹63,200/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
🎓 ಅರ್ಹತಾ ಶ್ರೇಣಿಗಳು:
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ (SSLC/Matriculation) ಪಾಸಾಗಿರಬೇಕು.
🎂ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ (03-ಸೆಪ್ಟೆಂಬರ್-2025ರ ಅನ್ವಯ)ಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿಯಲ್ಲಿ ಸಡಿಲಿಕೆ:
SC/ST ಅಭ್ಯರ್ಥಿಗಳು: 5 ವರ್ಷ
OBC ಅಭ್ಯರ್ಥಿಗಳು: 3 ವರ್ಷ
PwBD (UR): 10 ವರ್ಷ
PwBD (OBC): 13 ವರ್ಷ
PwBD (SC/ST): 15 ವರ್ಷ
💰 ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
💼 ಆಯ್ಕೆ ಪ್ರಕ್ರಿಯೆ:
ಅರ್ಜಿ ಶಾರ್ಟ್‌ಲಿಸ್ಟ್ (Shortlisting)
ಲಿಖಿತ ಪರೀಕ್ಷೆ
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
💻ಅರ್ಜಿ ಸಲ್ಲಿಸುವ ವಿಧಾನ:
✅ ಮೊದಲನೆಯದಾಗಿ ಭಾರತೀಯ ನೌಕಾಪಡೆಯ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
✅ ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
✅ ಕೆಳಗೆ ನೀಡಲಾದ ಭಾರತೀಯ ನೌಕಾಪಡೆಯ ಟ್ರೇಡ್ಸ್‌ಮನ್ ಸ್ಕಿಲ್ಡ್ ಅಪ್ರೆಂಟಿಸ್ ಆನ್‌ಲೈನ್‌ನಲ್ಲಿ ಅನ್ವಯಿಸು - ಲಿಂಕ್ ಅನ್ನು ಕ್ಲಿಕ್ ಮಾಡಿ.
✅ ಭಾರತೀಯ ನೌಕಾಪಡೆಯ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
✅ ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ) ಕೊನೆಯದಾಗಿ ಭಾರತೀಯ ನೌಕಾಪಡೆಯ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
✅ ಮುಖ್ಯವಾಗಿ ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯಿರಿ.
📅 ಪ್ರಮುಖ ದಿನಾಂಕಗಳು:
ಅರ್ಜಿಯ ಪ್ರಾರಂಭ ದಿನಾಂಕ: 13-ಆಗಸ್ಟ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-ಸೆಪ್ಟೆಂಬರ್-2025
⚡ಈ ನೇಮಕಾತಿಯು ಭಾರತೀಯ ನೌಕಾಪಡೆಯಂತಹ ಪ್ರತಿಷ್ಠಿತ ಸಂಸ್ಥೆಯಲ್ಲಿ ಕರಿಯರ್ ರೂಪಿಸಿಕೊಳ್ಳಲು ಮಹತ್ತ್ವದ ಅವಕಾಶವಾಗಿದೆ. ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಮತ್ತು ಭವಿಷ್ಯದತ್ತ ಮೊದಲ ಹೆಜ್ಜೆ ಇಡಿ!
Comments