ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಅಧೀನದಲ್ಲಿರುವ ಸಂವಹನ ಸಚಿವಾಲಯವು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 7 ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿಯ ನಿಯಮಾನುಸಾರ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 10 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
Chief Engineer-1, Department of Posts (Civil Wing),
4th Floor, Dak Bhawan, New Delhi-110001
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಡಿಪ್ಲೋಮಾ ತರಗತಿಯನ್ನು ಪೂರ್ಣಗೊಳಿಸಿರಬೇಕು.
- ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ- 56 ವರ್ಷಗಳ ವಯೋಮಿತಿ ಮೀರಿರಬಾರದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ44900-/- ರೂ ಗಳಿಂದ 142400/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments