ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೊಕೊ ಪೈಲಟ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ ಸರ್ಕಾರ ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ18799 ಸಹಾಯಕ ಲೊಕೊ ಪೈಲಟ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 20- ಜನವರಿ - 2024 ಹಾಗೂ ಕೊನೆಯ ದಿನಾಂಕ 25/06/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದಲ್ಲಿ1576 ಹುದ್ದೆಗಳಿವೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಥಮ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) , ದ್ವಿತೀಯ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) , ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಪರೀಕ್ಷೆ ಮೂಲಕ ಆಯ್ಕೆ ಮಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ITI / Diploma, Mechanical, Electrical, Engineering ಪದವಿ ವಿದ್ಯಾರ್ಹತೆಯಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದ ಅಭ್ಯರ್ಥಿಗಳು ಎಸ್‍ಸಿ/ಎಸ್‍ಟಿ/ಮಾಜಿ ಸೈನಿಕ/ಆರ್ಥಿಕ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂ.250/-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ರೂ.500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
SC/ ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 19,900/- ರೂ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments