Loading..!

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 4660 ಸಬ್ ಇನ್ ಸ್ಪೆಕ್ಟರ್ ಮತ್ತು ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree SSLC
Published by: Yallamma G | Date:14 ಮೇ 2024
not found

ಭಾರತ ಸರ್ಕಾರ ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ4660 ಸಬ್ ಇನ್ ಸ್ಪೆಕ್ಟರ್ ಮತ್ತು ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ15/04/2024 ರಿಂದ ಆರಂಭಗೊಂಡು ದಿನಾಂಕ14/05/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 4660
ಸಬ್ ಇನ್ ಸ್ಪೆಕ್ಟರ್ : 452
ಕಾನ್ ಸ್ಟೇಬಲ್ : 4208

No. of posts:  4660
Application Start Date:  15 ಎಪ್ರಿಲ್ 2024
Application End Date:  14 ಮೇ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSLC ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು. ವಿದ್ಯಾರ್ಹತೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- OBC ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 500
- ಅಭ್ಯರ್ಥಿಗಳು ಎಸ್‍ಸಿ/ ಎಸ್‍ಟಿ/ ಮಾಜಿ ಸೈನಿಕ/ ಮಹಿಳೆಯರು ಮತ್ತು ಆರ್ಥಿಕ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಸಬ್ ಇನ್ ಸ್ಪೆಕ್ಟರ್ : 20 ರಿಂದ 28
- ಕಾನ್ ಸ್ಟೇಬಲ್  : 18 ರಿಂದ 28  
ವಯೋಮಿತಿ ಸಡಿಲಿಕೆ :
SC/ ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree SSLC

Comments