Loading..!

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Mallappa Myageri | Date:26 ನವೆಂಬರ್ 2021
not found

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಮುಖ್ಯ ವ್ಯವಸ್ಥಾಪಕ  ಹುದ್ದೆಗಳು- 2,  ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆ- 1,  ಒಟ್ಟು 03 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ :  24-11-2021 ರಿಂದ 16-12-2021ರೊಳಗೆ ಅರ್ಜಿ ಸಲ್ಲಿಸಿ ಬಳಿಕ ಅರ್ಜಿಯನ್ನು ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ಕಛೇರಿ ವಿಳಾಸಕ್ಕೆ  ದಿನಾಂಕ : 20-12-2021ರೊಳಗೆ ಅರ್ಜಿಯನ್ನು ತಲುಪಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಕಛೇರಿ ವಿಳಾಸ: 
General Manager -HR, ITI limited, 
Regd & Corporate office ITI bhavan, 
Dooravani nagar, Bengaluru -560016.

No. of posts:  3
Application Start Date:  24 ನವೆಂಬರ್ 2021
Application End Date:  16 ಡಿಸೆಂಬರ್ 2021
Work Location:  ALL OVER INDIA
Selection Procedure: ಮುಖ್ಯ ವ್ಯವಸ್ಥಾಪಕ ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ತಯಾರಿಸಿ ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಮುಖ್ಯ ವ್ಯವಸ್ಥಾಪಕ ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿಯನ್ನು ಶೇ.60ರಷ್ಟು ಅಂಕಗಳೊಂದಿಗೆ ಮತ್ತು SC/ST/PH ಅಭ್ಯರ್ಥಿಗಳು ಶೇ.58ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.

Age Limit:

1) ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 45 ವರ್ಷಗಳು  ಮತ್ತು 
2) ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 42 ವರ್ಷಗಳ ವಯಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ನೇಮಕಾತಿ ನಿಯಮಾನುಸಾರ OBC/SC/ST/PH ಮತ್ತು Ex Army ಅಭ್ಯರ್ಥಿಗಳಿಗೆ  ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಮುಖ್ಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ.80,240/- ಮತ್ತು ಪ್ರಾಜೆಕ್ಟ್ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ.71,717/- ವೇತನವನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ALL OVER INDIA, KA,
TO Download the Officeal notification

Comments