ಭಾರತೀಯ ರೈಲ್ವೆಯ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ

ಭಾರತೀಯ ರೈಲ್ವೆಯ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಚೆನ್ನೈನಲ್ಲಿ ಖಾಲಿಯಿರುವ 1010 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 21-06-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಹುದ್ದೆಗಳ ವಿವರ : 1010
ಕಾರ್ಪೆಂಟರ್ - 90
ಎಲೆಕ್ಟ್ರಿಷಿಯನ್- 180
ಫಿಟ್ಟರ್- 260
ಮೆಕ್ಯಾನಿಸ್ಟ್ - 90
ಪೇಂಟರ್- 90
ವೆಲ್ಡರ್- 260
ಎಂಎಲ್ ಟಿ ರೇಡಿಯಾಲಜಿ- 05
ಎಂಎಲ್ ಟಿ ಪ್ಯಾಥಾಲಜಿ- 05
ಪಾಸಾ - 10
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿ ಮತ್ತು 12 ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
- ಒಬಿಸಿ ಅಭ್ಯರ್ಥಿಗಳಿಗೆ: ರೂ .100 / - + ಸೇವಾ ಶುಲ್ಕಗಳು
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯಸ್ಸನ್ನು ಮೀರಿರಬಾರದು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments