ಕೇಂದ್ರ ಗೃಹ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಇಂಟೆಲಿಜೆನ್ಸ್ ಬ್ಯುರೋ ಗ್ರೇಡ್ 2 ಹುದ್ದೆಗಳಿಗೆ ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/05/2022 ರೊಳಗೆ ಆನ್ ಲೈನ್ ಮೂಲಕವೇ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
ಯೋಜಿತ ಹುದ್ದೆಗಳ ವಿವರ: 150
* Computer Science and Information Technology - 56
* Electronics and Communication - 96
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳು ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2020, 2021 & 2022ರ ಗೇಟ್ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
* ಇಂಜಿನಿಯರಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.44,900/- ರಿಂದ 1,42,400/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments