ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 226 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 226 ಕಂಪ್ಯೂಟರ್ ಸೈನ್ಸ್ & ಇನ್ಫರ್ಮೇಷನ್ ಟೆಕ್ನಾಲಜಿ ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 23/12/2023 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡು ದಿನಾಂಕ 12/01/2024 ರಂದು ಕೊನೆಯಾಗುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 226
ಕಂಪ್ಯೂಟರ್ ಸೈನ್ಸ್ & ಇನ್ಫರ್ಮೇಷನ್ ಟೆಕ್ನಾಲಜಿ - 79
ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ - 147
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE, B.Tech / Engineering ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು 100/- ರೂ ಪರೀಕ್ಷಾ ಅರ್ಜಿ ಶುಲ್ಕ
ಸಾಮಾನ್ಯ ವರ್ಗ, EWS ಮತ್ತು OBC ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 27 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments