ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 797 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 797 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ (JIO) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/06/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Deploma/ BCA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ 500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 52,500/-ರೂ ಗಳಿಂದ 81,100/-ರೂ ಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments