ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ 490 ಗ್ರಾಜ್ಯುವೇಟ್ ಅಪ್ರೆಂಟಿಸ್, ಮೆಕ್ಯಾನಿಕಲ್, ಇನ್ ಸ್ಟ್ರುಮೆಂಟೇಶನ್, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10 ಸೆಪ್ಟೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 490
ಟ್ರೇಡ್ ಅಪ್ರೆಂಟಿಸ್ - 150
ಟೆಕ್ನಿಷಿಯನ್ ಅಪ್ರೆಂಟಿಸ್ - 110
ಗ್ರಾಜ್ಯುವೇಟ್ ಅಪ್ರೆಂಟಿಸ್/ ಅಕೌಂಟ್ಸ್ ಎಕ್ಸಿಕ್ಯೂಟಿವ್ - 230
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆನ್ ಲೈನ್ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC, ITI, ಡಿಪ್ಲೊಮಾ, B.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು 31-08-2023 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.
ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments