ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ ಎಕ್ಸಿಕೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 22 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 106
ಎಕ್ಸಿಕೂಟಿವ್ ಲೆವೆಲ್ 1 - 96
ಎಕ್ಸಿಕೂಟಿವ್ ಲೆವೆಲ್ 2 - 10
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಕ್ಸಿಕೂಟಿವ್ ಲೆವೆಲ್ 1 ಹುದ್ದೆಗಳಿಗೆ ಅಭ್ಯರ್ಥಿಗಳು 35 ವರ್ಷ ವಯೋಮಿತಿಯನ್ನು ಮೀರಿರಬಾರದು.
ಎಕ್ಸಿಕೂಟಿವ್ ಲೆವೆಲ್ - 2 ಹುದ್ದೆಗಳಿಗೆ ಅಭ್ಯರ್ಥಿಗಳು 45 ವರ್ಷ ವಯೋಮಿತಿಯನ್ನು ಮೀರಿರಬಾರದು.
- OBC ಅಭ್ಯರ್ಥಿಗಳಿಗೆ 3 ವರ್ಷ
- SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವೇತನ ನಿಗದಿಪಡಿಸಲಾಗಿದೆ.
ಎಕ್ಸಿಕೂಟಿವ್ ಲೆವೆಲ್ - 1 ಹುದ್ದೆಗಳಿಗೆ ಆಯ್ಕೆಯಾದವರಿಗೆ ವಾರ್ಷಿಕ 12 ಲಕ್ಷ ರೂ ಹಾಗೂ
ಎಕ್ಸಿಕೂಟಿವ್ ಲೆವೆಲ್ - 2 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 16 ಲಕ್ಷ ರೂ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments