Loading..!

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Tajabi Pathan | Date:7 ಮಾರ್ಚ್ 2023
not found

ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ ಎಕ್ಸಿಕೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 22 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 106 
ಎಕ್ಸಿಕೂಟಿವ್ ಲೆವೆಲ್ 1 - 96 
ಎಕ್ಸಿಕೂಟಿವ್ ಲೆವೆಲ್ 2 - 10 

No. of posts:  106
Application Start Date:  7 ಮಾರ್ಚ್ 2023
Application End Date:  22 ಮಾರ್ಚ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಕ್ಸಿಕೂಟಿವ್ ಲೆವೆಲ್ 1 ಹುದ್ದೆಗಳಿಗೆ ಅಭ್ಯರ್ಥಿಗಳು 35 ವರ್ಷ ವಯೋಮಿತಿಯನ್ನು ಮೀರಿರಬಾರದು. 
ಎಕ್ಸಿಕೂಟಿವ್ ಲೆವೆಲ್ - 2 ಹುದ್ದೆಗಳಿಗೆ ಅಭ್ಯರ್ಥಿಗಳು 45 ವರ್ಷ ವಯೋಮಿತಿಯನ್ನು ಮೀರಿರಬಾರದು.
- OBC ಅಭ್ಯರ್ಥಿಗಳಿಗೆ  3 ವರ್ಷ
- SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma Engineering

Comments