ಭಾರತೀಯ ತೈಲ ನಿಗಮ ನಿಯಮಿತ(IOCL)ದಲ್ಲಿ ಖಾಲಿ ಇರುವ 400 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೇಶದ ಪ್ರತಿಷ್ಠಿತ ತೈಲ ಸಂಸ್ಥೆಗಳಲ್ಲಿ ಒಂದಾಗಿರುವ, ಕೇಂದ್ರ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ತೈಲ ನಿಗಮ ನಿಯಮಿತ (IOCL)ದಲ್ಲಿ ಖಾಲಿ ಇರುವ400 ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ಪ್ರೆಂಟಿಸ್ ಮತ್ತು ಗ್ರಾಜುವೇಟ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ02 ಆಗಸ್ಟ್ 2024 ರಿಂದ ಪ್ರಾರಂಭಗೊಂಡು 19 ಆಗಸ್ಟ್ 2024 ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 400
ಟ್ರೇಡ್ ಅಪ್ರೆಂಟಿಸ್ : 95
ತಂತ್ರಜ್ಞ ಅಪ್ರೆಂಟಿಸ್ : 105
ಪದವೀಧರ ಅಪ್ರೆಂಟಿಸ್ : 200
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ₹12,000-21,000/- ರೂಗಳವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments