Loading..!

ಭಾರತೀಯ ತೈಲ ನಿಗಮವು 248 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
Published by: Basavaraj Halli | Date:14 ಜನವರಿ 2020
not found
ಭಾರತೀಯ ತೈಲ ನಿಗಮವು(IOCL) 248 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಜನವರಿ 27,2020 ಕೊನೆಯ ದಿನವಾಗಿದೆ.
No. of posts:  248
Application Start Date:  14 ಜನವರಿ 2020
Application End Date:  27 ಜನವರಿ 2020
Work Location:  ಕರ್ನಾಟಕ, ಆಂಧ್ರ ಪ್ರದೇಶ, ಪುದುಚೆರಿ, ತಮಿಳುನಾಡು, ತೆಲಂಗಾಣ
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹತ್ತನೇ ತರಗತಿ/ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್‌/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಅರ್ಜಿದಾರರಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ
Age Limit: ದಿನಾಂಕ ಡಿಸೆಂಬರ್ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌)ನ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 27,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
to download official notification

Comments

Raju Dasar ಜನ. 15, 2020, 12:06 ಅಪರಾಹ್ನ