ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 65 ಸಿವಿಲ್, ಎಲೆಕ್ಟ್ರಿಕಲ್, ರೆಫ್ರಿಜೆರೇಷನ್ & ಏರ್ ಕಂಡೀಷನಿಂಗ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/05/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 65
ಸಿವಿಲ್ - 39
ಎಲೆಕ್ಟ್ರಿಕಲ್ - 14
ರೆಫ್ರಿಜೆರೇಷನ್ & ಏರ್ ಕಂಡೀಷನಿಂಗ್ - 9
ಆರ್ಕಿಟೆಕ್ಚರ್ - 1
ಸಿವಿಲ್ – ಆಟೊನೊಮೌಸ್ ಬಾಡಿ [PRL] - 1
ಆರ್ಕಿಟೆಕ್ಚರ್ –ಆಟೊನೊಮೌ ಬಾಡಿ [PRL] - 1
ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನದ ಅನುಸಾರವಾಗಿರುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳು ವಯೋಮಿತಿ ಮೀರಿರಬಾರದು. .
ಮಾಜಿ ಸೈನಿಕರು ಮತ್ತು PWBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾಸಿಕ ₹.56,100/- ರೂಗಳವರೆಗೆ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments