ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:30 ಎಪ್ರಿಲ್ 2023

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ94 ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಲೈಬ್ರರಿ ಅಸಿಸ್ಟೆಂಟ್, ಫಿಟ್ಟರ್ ಮತ್ತು ಸ್ಟಾನಿಯೊಗ್ರಾಫರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/05/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 94
Application Start Date: 30 ಎಪ್ರಿಲ್ 2023
Application End Date: 16 ಮೇ 2023
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ ITI/ Diploma/ Engineering/ B.Sc/ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ 16/05/2023 ಕ್ಕೆ ಅನ್ವಯವಾಗುವಂತೆ ಕನಿಷ್ಠ18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments