Loading..!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:24 ಸೆಪ್ಟೆಂಬರ್ 2024
not found

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅನ್ನು 1969 ಆ.15 ರಂದು ಸ್ಥಾಪನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ (ISRO HSFC) ನಲ್ಲಿ ಖಾಲಿ ಇರುವ 103 ಮೆಡಿಕಲ್ ಆಫೀಸರ್, ಟೆಕ್ನಿಷನ್-B, ಸೈನ್ ಟಿಫಿಕ್ ಅಸಿಸ್ಟೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಇಂಜಿನಿಯರ್-SC ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ09/10/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  103
Application Start Date:  24 ಸೆಪ್ಟೆಂಬರ್ 2024
Application End Date:  9 ಅಕ್ಟೋಬರ್ 2024
Work Location:  ಭಾರತದಾದ್ಯಂತ
Selection Procedure: ISRO HSFC ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ, ITI, ಡಿಪ್ಲೊಮಾ, BE/ B.Tech, B.Sc, ಪದವಿ, MBBS, ME/ M.Tech, MD ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ₹750/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗಿರುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 30 ವರ್ಷಗಳು ವಯೋಮಿತಿ ಮೀರಿರಬಾರದು.
- OBC ಅಭ್ಯರ್ಥಿಗಳಿಗೆ : 3 ವರ್ಷ 
- SC/ ST ಅಭ್ಯರ್ಥಿಗಳಿಗೆ : 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments