ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 20 ಅಸಿಸ್ಟೆಂಟ್ ಸಬ್-ಇನ್ಸ್ಪೆಕ್ಟರ್ (ಲ್ಯಾಬೋರೇಟರಿ ಟೆಕ್ನಿಷಿಯನ್), ಅಸಿಸ್ಟೆಂಟ್ ಸಬ್-ಇನ್ಸ್ಪೆಕ್ಟರ್ (ರೇಡಿಯೋಗ್ರಾಫ್ರ್), ಕಾನ್ಸ್ಟೇಬಲ್ (ಪ್ಯೂನ್), ಕಾನ್ಸ್ಟೇಬಲ್ (ಡ್ರೆಸ್ಸೆರ್) ಮತ್ತು ಕಾನ್ಸ್ಟೇಬಲ್ (ಲಿನಿನ್ ಕೀಪರ್) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆಯ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ28 ಅಕ್ಟೋಬರ್ 2024 ಹಾಗೂ ಕೊನೆಯ ದಿನಾಂಕ 26 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು PUC/ Diploma/ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments