Loading..!

ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆಯು ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:6 ಜೂನ್ 2022
not found

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯು ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ಭರ್ತಿಗೆ ಇಲಾಖೆಯು ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು ಗ್ರೂಪ್‌ ಸಿ ನಾನ್‌ ಗೆಜೆಟೆಡ್ ಹುದ್ದೆಗಳಾಗಿದ್ದು, ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಒಟ್ಟು ಹುದ್ದೆಗಳ ವಿವರ: 38
* ಸಹಾಯಕ ಸಬ್‌ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್) (ಪುರುಷ) : 19
* ಸಹಾಯಕ ಸಬ್‌ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್) (ಮಹಿಳಾ) : 02
* ಐಟಿಬಿಪಿಎಫ್‌ ನಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಹುದ್ದೆಗಳ ವಿವರ 
ಎಎಸ್‌ಐ (ಸ್ಟೆನೋಗ್ರಾಫರ್) (ನಿಯಮಿತ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ) : 17

No. of posts:  38
Application Start Date:  6 ಜೂನ್ 2022
Application End Date:  7 ಜುಲೈ 2022
Work Location:  All over India
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಶಾರೀರಿಕ ದಕ್ಷತೆ ಪರೀಕ್ಷೆ, ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ಮತ್ತು ದಾಖಲೆ ವಿವರವಾದ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ PUC (12th) ಪಾಸಾಗಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು.ಗರಿಷ್ಠ 25 ವರ್ಷಗಳು ಮೀರಿರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 29,000/- ರಿಂದ 92,300/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಜೂನ್ 7, 2022, 11:44 ಪೂರ್ವಾಹ್ನ