ಭಾರತ ಸರ್ಕಾರ ಅಧೀನದ ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿ (IWST)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತ ಸರ್ಕಾರದ ಪರಿಸರ ಮತ್ತು ಅರಣ್ಯ ಸಚಿವಾಲಯದ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಯಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕದ ಬೆಂಗಳೂರಿನಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿ (IWST) ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 17 ಲೈಬರರಿ ಇನ್ಫಾರ್ಮೆಷನ್ ಅಸಿಸ್ಟೆಂಟ್, ಲೋವರ್ ಡಿವಿಶನ್ ಕ್ಲರ್ಕ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಂಚೆ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಅನುಸಾರವಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಯಸುವ ಅಭ್ಯರ್ಥಿಗಳು ಅಂಚೆ ಮೂಲಕ ದಿನಾಂಕ03/01/2025 ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
The Director, Institute of Wood Science & Technology, 18th Cross, Malleswaram, Bengaluru-560003.
ಹುದ್ದೆಗಳ ವಿವರ : 17
ಗ್ರಂಥಾಲಯ ಮಾಹಿತಿ ಸಹಾಯಕ : 1
ಕೆಳ ವಿಭಾಗದ ಗುಮಾಸ್ತ : 4
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ : 12
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments