ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಹಂಪಿನಗರ, ವಿಜಯನಗರ ಮತ್ತು ಬೆಂಗಳೂರು ಈ ಬ್ಯಾಂಕಿನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ (ಡಿ.ಬಿ.ಎ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳ ಜೊತೆಯಲ್ಲಿ ನಕಲು ಪ್ರತಿಗಳನ್ನು ಗೆಜೆಟೆಡ್ ಅಧಿಕಾರಿ ಅವರಿಂದ ದೃಢೀಕರಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾದ 30-11-2021 ರ ಸಂಜೆ 05:30 ರೊಳಗೆ ಅಂಚೆಯ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಲು ಸೂಚಿಸಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕ್ ಲಿ.,
ಅಂಚೆ ಪೆಟ್ಟಿಗೆ ಸಂಖ್ಯೆ 03, ಹಂಪಿನಗರ, ಬೆಂಗಳೂರು-560104.
1) ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು 1000/-ರೂ ಹಾಗೂ
2) SC/ST/Cat-1 ರ ಅಭ್ಯರ್ಥಿಗಳು ರೂ500/-ರೂ
1) ಸಾಮಾನ್ಯ ವರ್ಗದವರಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳು
2) ಹಿಂದುಳಿದ ವರ್ಗದವರಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷಗಳು
3) SC/ST/Cat-1 ರ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷಗಳು
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.





Comments