ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 388 ಹುದ್ದೆಗಳ ನೇರ ನೇಮಕಾತಿ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 388 ಅಸಿಸ್ಟೆಂಟ್, ಜೂನಿಯರ್ ಆಪರೇಟರ್, ಸ್ಟೆಮೋಗ್ರಾಫರ್, ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ರಿಸರ್ಚ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10 ಮಾರ್ಚ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
* Group ‘A’ ಹುದ್ದೆಗಳಿಗೆ 1500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/ಮಹಿಳೆ ಅಭ್ಯರ್ಥಿಗಳಿಗೆ 1000/- ರೂ
PWD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
* Group ‘B’ ಮತ್ತು Group ‘C’ ಹುದ್ದೆಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/ಮಹಿಳೆ ಅಭ್ಯರ್ಥಿಗಳಿಗೆ 600/- ರೂ
PWD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments