ಪುದುಚೇರಿಯ ಜವಾಹರಲಾಲ್ ಇನ್ ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಅರೋಗ್ಯ ಮತ್ತು ಕುಟುಂಬ ಇಲಾಖೆ ಅಧೀನದ ಪುದುಚೇರಿಯ ಜವಾಹರಲಾಲ್ ಇನ್ ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚನಲ್ಲಿ ಖಾಲಿ ಇರುವ 209 ನರ್ಸಿಂಗ್ ಆಫೀಸರ್, ಎಕ್ಸ್ ರೇ ಟೆಕ್ನಿಷಿಯನ್, ಜೂನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/08/2024 ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರಲಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬೆಂಗಳೂರು ಸೇರಿದಂತೆ ದೇಶದ ವಿವಿದೆಡೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B.Sc ರೇಡಿಯೇಶನ್ ಟೆಕ್ನಾಲಜಿ/ ಇಲೆಕ್ಟ್ರಾನಿಕ್ ಇಂಜೀನಿರಿಂಗ್/ ಡಿಪ್ಲೊಮಾ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- OBC ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 1500/-
- ಎಸ್‍ಸಿ/ ಎಸ್‍ಟಿ/ ಮಾಜಿ ಸೈನಿಕ/ ಮಹಿಳೆಯರು ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.1200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಎಲ್ಲ ಹುದ್ದೆಗಳಿಗೂ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಟ 35 ವಯಸ್ಸು ಎಂದು ನಿಗದಿ ಮಾಡಲಾಗಿದೆ. ಮೀಸಲಾತಿಯನ್ವಯ ಎಲ್ಲ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.
ಈ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ .
ನರ್ಸಿಂಗ್ ಆಫೀಸರ್ - 44900/-
ಎಕ್ಸ್ ರೇ ಟೆಕ್ನಿಷಿಯನ್ - 35400/-
ಜೂನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ - 19900/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments