ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ 63 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:30 ಡಿಸೆಂಬರ್ 2020

ಕಲಬುರಗಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 63 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆದೇಶ ಜಾರಿಕಾರರು, ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 31-12-2020
* ಹುದ್ದೆಗಳ ವಿವರ:
- ಶೀಘ್ರಲಿಪಿಕಾರರು - 08 ಹುದ್ದೆಗಳು
- ಹುದ್ದೆಗಳು ಬೆರಳಚ್ಚುಗಾರರು - 01 ಹುದ್ದೆ
- ಬೆರಳಚ್ಚು ನಕಲುಕಾರರು - 01 ಹುದ್ದೆ
- ಜವಾನರು- 51 ಹುದ್ದೆಗಳು
- ಆದೇಶ ಜಾರಿಕಾರರು - 02 ಹುದ್ದೆಗಳು
No. of posts: 63
Application End Date: 31 ಡಿಸೆಂಬರ್ 2020
Work Location: ಕಲಬುರಗಿ
Selection Procedure:
- ಆಯಾ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ, ಟೈಪಿಂಗ್ ಟೆಸ್ಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
* ಬೆರಳಚ್ಚುಗಾರ ಹುದ್ದೆಗಳಿಗೆ: ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
* ಬೆರಳಚ್ಚುಗಾರ ನಕಲುಗಾರ ಹುದ್ದೆಗಳಿಗೆ: ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
* ಆದೇಶ ಜಾರಿಕಾರ ಹುದ್ದೆಗೆ: ಲಘು/ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
Fee:
* ಹುದ್ದೆಗಳ ಅನುಸಾರವಾಗಿ :
- ಹಿಂದುಳಿದ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- 200/- ರೂ ಅರ್ಜಿ ಶುಲ್ಕವನ್ನ ಪಾವತಿಸಬೇಕು.
- ಪ. ಜಾತಿ, ಪ. ಪಂಗಡದ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ - ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 38 ವರ್ಷಗಳನ್ನು ಮೀರಿರಬಾರದು, ಹಾಗೂ ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿರುತ್ತದೆ.
Pay Scale:
* ಹುದ್ದೆಗಳ ಅನುಗುಣವಾಗಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ
- ಶೀಘ್ರಲಿಪಿಕಾರರು - 27650/- ರೂ ದಿಂದ 52650 /- ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.
- ಬೆರಳಚ್ಚುಗಾರರು - 21400 /- ರೂ ದಿಂದ 42000 /- ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.
- ಬೆರಳಚ್ಚು ನಕಲುಕಾರರು - 21400 /- ರೂ ದಿಂದ 42000 /- ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.
- ಜವಾನರು- 17000 /-ರೂ ದಿಂದ 28950 /- ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.
- ಆದೇಶ ಜಾರಿಕಾರರು - 19950 /-ರೂ ದಿಂದ 37900 /-ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.





Comments