ಕರ್ನಾಟಕ ಸರ್ಕಾರದಿಂದ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 15,000 ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಮಾರ್ಚ್ 23 ರಿಂದ ಅರ್ಜಿ ಸಲ್ಲಿಕೆ ಆರಂಭ

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ ಖಾಲಿ ಇರುವ ಒಟ್ಟು 15,000 ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8 ನೇ ತರಗತಿ) ಹುದ್ದೆಗಳನ್ನು ನೇಮಕ ಮಾಡಲು ಇದೆ ದಿನಾಂಕ ಮಾರ್ಚ್ 21 ರಂದು ಅಧಿಸೂಚನೆ ಹೊರಡಿಸಲಿದೆ.
ಕರ್ನಾಟಕ ಶಿಕ್ಷಣ ಇಲಾಖೆ (ಸಾರ್ವಜನಿಕ ಶಿಕ್ಷಣ ಇಲಾಖೆ) ಯಾ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಇದೆ ದಿನಾಂಕ ಮಾರ್ಚ್ಆ 23 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 22/04/2022 ಕೊನೆಯ ದಿನವಾಗಿರುತ್ತದೆ.
ಒಟ್ಟು ಹುದ್ದೆಗಳ ವಿವರ:15,000
* ಪದವೀಧರ ಪ್ರಾಥಮಿಕ ಶಿಕ್ಷಕ 6 ರಿಂದ 8 ನೇತರಗತಿ
(ಇತರೆ, 10,000 + ಕಲ್ಯಾಣ ಕರ್ನಾಟಕ 5,000)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ(CET) ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
- ಓಟ್ಟಾರೆಯಾಗಿ ಕನಿಷ್ಟ (ಸರಾಸರಿ) ಶೇ. 50 ಅಂಕಗಳೊಂದಿಗೆ ಪದವಿ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ 2 ವರ್ಷಗಳ ಡಿಪ್ಲೋಮಾ ಅಥವಾ ಡಿಪ್ಲೋಮಾದಲ್ಲಿ ವಿಶೇಷ ಶಿಕ್ಷಣ
ಅಥವಾ
- ಒಟ್ಟಾರೆಯಾಗಿ ಕನಿಷ್ಟ (ಸರಾಸರಿ) ಶೇ. 50 ಅಂಕಗಳೊಂದಿಗೆ ಪದವಿ ಹಾಗೂ ಶಿಕ್ಷಣ ವಿಷಯದಲ್ಲಿ ಅಥವಾ ವಿಶೇಷ ಶಿಕ್ಷಣದಲ್ಲಿ ಪದವಿ:
ಅಥವಾ
- ಓಟ್ಟಾರೆಯಾಗಿ ಕನಿಷ್ಟ (ಸರಾಸರಿ) ಶೇ. 50 ಅಂಕಗಳೊಂದಿಗೆ ಪದವಿ ಪೂರ್ವ ಶಿಕ್ಷಣ ಹಾಗೂ 4 ವರ್ಷಗಳ ಪ್ರಾಥಮಿಕ ಶಿಕ್ಷಣ ವಿಷಯದಲ್ಲಿ ಪದವಿ ಅಥವಾ 4 ವರ್ಷಗಳ ಶಿಕ್ಷಣ ವಿಷಯದಲ್ಲಿ ಪದವಿ.ಮತ್ತು
* ಭಾರತ ಸರ್ಕಾರ ಅಥವಾ ಕರ್ನಾಟಕ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣತೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21ವರ್ಷ ಮತ್ತು ಗರಿಷ್ಠ 47ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650/- 52,650/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments