ಬೆಳಗಾವಿಯ KLE ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:19 ಅಕ್ಟೋಬರ್ 2020

ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿ ಇಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ಎಲ್ಲಾ ಸಂಬಂಧಿತ ದಾಖಲೆಗಳು ಮತ್ತು ಪ್ರಶಂಸಾಪತ್ರಗಳೊಂದಿಗೆ, ಅಧ್ಯಕ್ಷರು, ಆಡಳಿತ ಮಂಡಳಿ, ಕೆ ಎಲ್ ಇ ಸೊಸೈಟಿ ಕಾಲೇಜು ರೋಡ್ ಬೆಳಗಾವಿ- 590001 ಇಲ್ಲಿಗೆ ದಿನಾಂಕ 24-10-2020 ರೊಳಗೆ ತಲುಪುವಂತೆ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತು ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Application Start Date: 18 ಅಕ್ಟೋಬರ್ 2020
Application End Date: 24 ಅಕ್ಟೋಬರ್ 2020
Qualification:
- ಕನಿಷ್ಠ 60% ಅಂಕಗಳೊಂದಿಗೆ ವಿಜ್ಞಾನ / ವಾಣಿಜ್ಯದಲ್ಲಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
- ಕನಿಷ್ಠ 5 ವರ್ಷಗಳ ಆಡಳಿತ ಅನುಭವ ಮತ್ತು ಕನಿಷ್ಠ 10 ವರ್ಷಗಳ ಬೋಧನಾ ಅನುಭವವನ್ನು ಹೊಂದಿರಬೇಕು.





Comments