Loading..!

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:8 ಮಾರ್ಚ್ 2024
not found

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ93 ಬ್ಯಾಂಕ್ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ06/04/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 93
* ಉಳಿಕೆ ಮೂಲ ವೃಂದ - 85
* ಕಲ್ಯಾಣ ಕರ್ನಾಟಕ - 08

No. of posts:  93
Application Start Date:  8 ಮಾರ್ಚ್ 2024
Application End Date:  6 ಎಪ್ರಿಲ್ 2024
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ- 1 ರ ಅಭ್ಯರ್ಥಿಗಳು: Rs. 500/-
* ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಇತರೆ ಹಿಂದುಳಿದ ಜಾತಿ /  ಪ್ರವರ್ಗ 2A,2B, 3A, 3B  ಅಭ್ಯರ್ಥಿಗಳು : Rs. 1000/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಮತ್ತು  ಗರಿಷ್ಠ ವಯೋಮಿತಿಯನ್ನುಈ ಕೆಳಗಿನಂತೆ ನಿಗದಿಪಡಿಸಲಾಗಿದೆ. 
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ- 1 ರ ಅಭ್ಯರ್ಥಿಗಳು: 40 ವರ್ಷಗಳು
* ಇತರೆ ಹಿಂದುಳಿದ ಜಾತಿ /  ಪ್ರವರ್ಗ 2A,2B, 3A, 3B  ಅಭ್ಯರ್ಥಿಗಳು: 38 ವರ್ಷಗಳು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,425/- ರಿಂದ 87,125/-ರೂಗಳ ವರೆಗೆ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments