ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ 14 ಡೇಟಾ ಇಂಜಿನಿಯರ್, ಕ್ಲೌಡ್ ಸೆಕ್ಯುರಿಟಿ ಇಂಜಿನಿಯರ್, ಅಪ್ಲಿಕೇಶನ್ ಭದ್ರತಾ ಇಂಜಿನಿಯರ್ ಮತ್ತು ಫೈರ್ವಾಲ್ ನಿರ್ವಾಹಕರು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26 ಜುಲೈ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26 ಜುಲೈ 2024 ರೊಳಗಾಗಿ ಅರ್ಜಿಯನ್ನು ಇ ಮೇಲ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಇ ಮೇಲ್ ವಿಳಾಸ : recruitment@ktkbank.com
ಹುದ್ದೆಗಳ ವಿವರ : 14
ಡೇಟಾ ಇಂಜಿನಿಯರ್ - 11
ಕ್ಲೌಡ್ ಸೆಕ್ಯುರಿಟಿ ಇಂಜಿನಿಯರ್ - 01
ಅಪ್ಲಿಕೇಶನ್ ಭದ್ರತಾ ಇಂಜಿನಿಯರ್ - 01
ಫೈರ್ವಾಲ್ ನಿರ್ವಾಹಕರು - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುMCA, M.Tech, B.Sc, BCA, B.E or B.Tech ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 48,480/- ರೂ ಗಳಿಂದ 93,960/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.




Comments