Loading..!

ಕರ್ನಾಟಕ ಬ್ಯಾಂಕ್ ದೇಶದಾದ್ಯಂತ ಖಾಲಿ ಇರುವ ಪ್ರೊಬೆಷನರಿ ಅಧಿಕಾರಿ (PO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
Published by: Basavaraj Halli | Date:9 ಜನವರಿ 2020
not found
ಕರ್ನಾಟಕ ಬ್ಯಾಂಕ್ ದೇಶದಾದ್ಯಂತ ತನ್ನ ಶಾಖೆಗಳಲ್ಲಿ ಖಾಲಿ ಇರುವ ಪ್ರೊಬೆಷನರಿ ಅಧಿಕಾರಿ(PO) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 18,2020.

ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಕರ್ನಾಟಕ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.
Application Start Date:  8 ಜನವರಿ 2020
Application End Date:  18 ಜನವರಿ 2020
Last Date for Payment:  18 ಜನವರಿ 2020
Work Location:  ಭಾರತದಾದ್ಯಂತ
Selection Procedure: ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯು ಫೆಬ್ರವರಿ 16,2020ರಂದು ಬೆಂಗಳೂರು, ಧಾರವಾಡ-ಹುಬ್ಬಳ್ಳಿ, ಮಂಗಳೂರು, ಮುಂಬೈ ಮತ್ತು ನವದೆಹಲಿಯಲ್ಲಿ ನಡೆಯಲಿದೆ.
Qualification: ಅಭ್ಯರ್ಥಿಗಳು ದಿನಾಂಕ ಜನವರಿ 1, 2020ರ ಅನ್ವಯ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು UGC ಇಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸ್ನಾತಕೋತ್ತರ ಪದವಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುವದಿಲ್ಲ.
Fee: ಸಾಮಾನ್ಯ/OBC ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜನವರಿ 18, 2020ರೊಳಗೆ ಪಾವತಿಸಬೇಕಿರುತ್ತದೆ.
Age Limit: ದಿನಾಂಕ ಜನವರಿ 1, 2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಕರ್ನಾಟಕ ಬ್ಯಾಂಕ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 69,000/-ರೂ ವೇತನವನ್ನು ನೀಡಲಾಗುವುದು.
to download official notification Karnataka Bank PO recruitment 2020
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments