ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 680 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:11 ಜನವರಿ 2022

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 680 ಸಮುದಾಯ ಆರೋಗ್ಯ ಅಧಿಕಾರಿಗಳ (CHO) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/01/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 680
Application Start Date: 6 ಜನವರಿ 2022
Application End Date: 23 ಜನವರಿ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಎಸ್ಸಿ ನರ್ಸಿಂಗ್/ಪೋಸ್ಟ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು. ಜತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ/ ಐಎನ್‌ಸಿ ನಿಂದ ನೋಂದಣಿ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
* ಸಾಮಾನ್ಯವರ್ಗ 40 ವರ್ಷ
* ಹಿಂದುಳಿದ ವರ್ಗ 38 ವರ್ಷ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 35 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Karnataka, KA,

Comments