ಕರ್ನಾಟಕ ನೋಂದಣಿ ಮತ್ತು ಮುದ್ರಾoಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾoಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಡಿ (ಜವಾನರ) ಬ್ಯಾಕ್ ಲಾಗ್ ಹುದ್ದೆಯ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯ ನಮೂನೆಯ ಪ್ರತಿಯನ್ನು ಇಲಾಖೆಯ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ನಿಗದಿತ ವಿಳಾಸಕ್ಕೆ ಭರ್ತಿ ಮಡಿದ ಅರ್ಜಿಯನ್ನು ದಿನಾಂಕ 31/03/2022 ರೊಳಗೆ ಅಂಚೆಯ ಮೂಲಕವೇ ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ಅಂಚೆ ವಿಳಾಸ: ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾoಕಗಳ ಆಯುಕ್ತರು, ಕಂದಾಯ ಭವನ, 8ನೇ ಮಹಡಿ, ಕೆಂಪೇಗೌಡ ರಸ್ತೆ ಬೆಂಗಳೂರು - 560009
ಸೂಚನೆ: ಈ ಹುದ್ದೆಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಹುದ್ದೆಗೆ S.S.L.C (10th) ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ
ಯಾವುದೇ ರೀತಿಯ ಅರ್ಜಿ ಶುಲ್ಕವನ್ನ ಅಭ್ಯರ್ಥಿಗಳು ಪಾವತಿಸುವ ಅಗತ್ಯವಿರುವದಿಲ್ಲ
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments