Loading..!

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿ
Tags: Degree
Published by: Siddaram Halli | Date:4 ಮೇ 2020
not found
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಒಟ್ಟು 3 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಿವೃತ್ತ ಕೆ.ಎ.ಎಸ್ ಅಧಿಕಾರಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳು ಮೇ 11, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  3
Application Start Date:  20 ಎಪ್ರಿಲ್ 2020
Application End Date:  11 ಮೇ 2020
Work Location:  ಕರ್ನಾಟಕ
Selection Procedure: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಸಹಾಯಕ ಆಯುಕ್ತರು ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.
Age Limit: ಅರ್ಜಿದಾರರು ಗರಿಷ್ಠ 70 ವರ್ಷ ವಯಸ್ಸನ್ನು ಮೀರಿರಬಾರದು.
Pay Scale: ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವದು ಹೇಗೆ :
ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ನೊಂದಾಯಿತ ಅಂಚೆ ಮುಖಾಂತರ "ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು- 560003" ರವರ ಕಛೇರಿಗೆ ಮೇ 11, 2020ರ ಮಧ್ಯಾಹ್ನ ೪:೩೦ ರೊಳಗಾಗಿ ತಲುಪುವಂತೆ ಸಲ್ಲಿಸಬಹುದಾಗಿರುತ್ತದೆ.

ಈ ಹುದ್ದೆಗಳ ಬಗೆಗಿನ ಹೆಚ್ಚಿನ ವಿವರ ಹಾಗು ಅರ್ಜಿ ನಮೂನೆಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
to download official notification

Comments

Vani N ಮೇ 14, 2020, 1:20 ಅಪರಾಹ್ನ