ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಉಚಿತ ಪೂರ್ವಭಾವಿ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ ಪೂರ್ವಭಾವಿ ತರಬೇತಿ ನೀಡಲು ಯು.ಪಿ.ಎಸ್.ಸಿ/ ಕೆ.ಎ.ಎಸ್/ ಗ್ರೂಪ್ - ಸಿ/ ಬ್ಯಾಂಕಿಂಗ್/ ಎಸ್.ಎಸ್.ಸಿ/ ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ / ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ತರಬೇತಿಗೆ ಬೇಕಾದ ಅಭ್ಯರ್ಥಿಗಳ ವಿವರ :8852
UPSC - 577
KAS - 695
Group - C - 1900
Banking - 1900
RRB - 1755
SSC - 1755
Judiciary Services - 270
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವರ ಮೂಲಕ ಸಾಮಾನ್ಯ ಪ್ರವೇಶ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗದಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆನ್ ಲೈನ್ ಕೌನ್ಸಿಲಿಂಗ್ ಮೂಲಕ ಅಭ್ಯರ್ಥಿಗಳನ್ನು ತರಬೇತಿ ಸಂಸ್ಥೆಗೆ ನಿಯೋಜಿಸಲಾಗುತ್ತದೆ.
ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ಯಾವುದೇ ಪದವಿಯಲ್ಲಿ ಶೇ.50 ಕ್ಕಿಂತ ಹೆಚ್ಚು ಅಂಕಗಳಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಈ ತರಬೇತಿ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.




Comments