ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನಿಗದಿಪಡಿಸಿದ ದಿನಾಂಕ 21/01/2022ರೊಳಗೆ ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
*ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯ ಎರಡು ವರ್ಷಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಶೇ.25ರಷ್ಟನ್ನು ಪರಿಗಣನೆಗೆ ತೆಗೆದುಕೊಳ್ಳುವುದು,
*ಪಿಎಚ್.ಡಿ., ಎನ್ಇಟಿ/ಕೆ-ಸೆಟ್/ಎಲ್ ಎಸ ಇಟಿ ಮತ್ತು ಎಂ.ಫಿಲ್ ಪದವಿ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು,
*ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ 16 ವರ್ಷಕ್ಕೆ 48 ಅಂಕಗಳ ಮಿತಿಗೊಳಿಸಲಾಗಿದೆ,
*ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುತದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments