Loading..!

ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಒಟ್ಟು 3006 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Basavaraj Halli | Date:18 ಅಕ್ಟೋಬರ್ 2021
not found
ಕರ್ನಾಟಕ ರಾಜ್ಯ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೀದರ್, ಬಳ್ಳಾರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳು ಜೊತೆಗೆ ಹಾವೇರಿ, ಕೋಲಾರ, ಬೆಳಗಾವಿ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿ (ಡಿಎಚ್ ಓ) ಹುದ್ದೆಗಳನನ್ನು ಗುತ್ತಿಗೆ ಆದರದ ಮೇಲೆ ನೇಮಕ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 3006 ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
No. of posts:  3006
Application Start Date:  27 ಸೆಪ್ಟೆಂಬರ್ 2021
Application End Date:  18 ಅಕ್ಟೋಬರ್ 2021
Work Location:  ಕರ್ನಾಟಕ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ / ಪೋಸ್ಟ್ ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿರಬೇಕು, ಜೊತೆಗೆ ಕನ್ನಡ ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿ, ಎಸ್ಸಿ ಎಸ್ಟಿ ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 22000 ದಿಂದ 24,228 ವರೆಗೆ ಮಾಸಿಕ ವೇತನ ಹಾಗೂ 8000 ವರೆಗೂ ಪ್ರೋತ್ಸಾಹದನವನ್ನು ಪಡೆಯಬಹುದಾಗಿದೆ.

- ಈ ನೇಮಕಾತಿಯ ಕುರಿತು ಇನ್ನಷ್ಟು ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ  
To Download the Official Notification of Karnataka Health Dept Recruitment 2021

Comments

Rahul Murthy ಸೆಪ್ಟೆ. 28, 2021, 1:58 ಅಪರಾಹ್ನ