ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ಕೇಬಲ್ ಆಪರೇಟರ್ (Group- D) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/07/2023ರ ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು S.S.L.C/ ITI ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು 200/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900/-ರೂ ಗಳಿಂದ 63,200/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments