ಕರ್ನಾಟಕದ ವಿವಿಧ ಕೋರ್ಟ್ ಗಳಲ್ಲಿ ಖಾಲಿ ಇರುವ ಜಿಲ್ಲಾ ನ್ಯಾಯಾಧೀಶರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ವಿವಿಧ ಕೋರ್ಟ್ ಗಳಲ್ಲಿ ಖಾಲಿ ಇರುವ 14 ನ್ಯಾಯಾಧೀಶರ ಹುದ್ದೆಗಳ ಭರ್ತಿ ಮಾಡಲು ಹೈಕೋರ್ಟ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದೆಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 17/11/2023ರ ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಠ 7 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು 1000/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 144840/- ರೂ ಗಳಿಂದ 194660/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments