ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಕೇಂದ್ರೀಯ ವಿದ್ಯಾಲದಲ್ಲಿ ಖಾಲಿ ಇರುವ ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೇನ್ಡ್ ಗ್ರಾಜುವೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 25/02/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.
ಹುದ್ದೆಗಳ ವಿವರ ಕೆಳಗಿನಂತಿದೆ
ಪೋಸ್ಟ್ ಗ್ರಾಜುವೇಟ್ ಟೀಚರ್ (ಹಿಂದಿ, ಇಂಗ್ಲಿಷ್, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ, ವಾಣಿಜ್ಯ ಹಾಗೂ ಕಂಪ್ಯೂಟರ್ ಸೈನ್ಸ್)
ಟ್ರೇನ್ಡ್ ಗ್ರಾಜುವೇಟ್ ಟೀಚರ್ (ಕನ್ನಡ, ಹಿಂದಿ, ಇಂಗ್ಲಿಷ್, ಗಣಿತ, ಸಂಸ್ಕೃತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ)
ಪ್ರೈಮರಿ ಟೀಚರ್
ಕಂಪ್ಯೂಟರ್ ಬೋಧಕರು
ಕ್ರೀಡಾ ತರಬೇತಿದಾರರು
ಯೋಗ ಶಿಕ್ಷಕ
ಸಂದರ್ಶನ ನಡೆಯುವ ಸ್ಥಳ : ಕೇಂದ್ರೀಯ ವಿದ್ಯಾಲಯ ಡಿ.ಆರ್.ಡಿ.ಓ,
ಸಿ.ವಿ. ರಾಮನ್ ನಗರ, ಬೆಂಗಳೂರು - 560093
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕ್ಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಕೇಂದ್ರೀಯ ವಿದ್ಯಾಲಯವು ವೇತನವನ್ನು ನಿಗದಿಪಡಿಸಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments