Loading..!

ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿ (KLE) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:24 ನವೆಂಬರ್ 2021
not found

ಕರ್ನಾಟಕದ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿಯಲ್ಲಿ (KLE)ಯಲ್ಲಿ ಖಾಲಿ ಇರುವ ಭೌತಶಾಸ್ತ್ರ, ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಿತ, ಕಂಪ್ಯೂಟರ್ ವಿಜ್ಞಾನ, ವಾಣಿಜ್ಯ, ಅರ್ಥಶಾಸ್ತ್ರ, ಇಂಗ್ಲೀಷ್, ಕನ್ನಡ, ಹಿಂದಿ, ಭೌತಿಕ ನಿರ್ದೇಶಕ, ಪತ್ರಿಕೋದ್ಯಮ, ಭೂಗೋಳ ಮತ್ತು ರಾಜ್ಯಶಾಸ್ತ್ರ ವಿಷಯಗಳ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ನಿಗದಿಪಡಿಸಿದ ಕೊನೆಯ ದಿನಾಂಕವಾದ : 27-11-2021 ರೊಳಗೆ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಬೇಕು. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಕರೆಯಲಾಗುವುದು.

Application Start Date:  24 ನವೆಂಬರ್ 2021
Application End Date:  27 ನವೆಂಬರ್ 2021
Work Location:  All Over Karnataka
Selection Procedure:
ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ತಯಾರಿಸಿ, ನಂತರ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಶೇಕಾದ .60% ಅಂಕಗಳೊಂದಿಗೆ M.A/M.Com /M.Sc/M.P.Ed/MCA ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
* SET/NET/Ph.D/B.Ed ವಿದ್ಯಾರ್ಹತೆ ಹೊಂದಿರುವವರಿಗೆ ಹೆಚ್ಚಿನ ಆದ್ಯತೆಯನ್ನು ಕೊಡಲಾಗುವುದು.
Pay Scale:
ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಹತೆ ಮತ್ತು ಕೆಲಸದ ಅನುಭವಕ್ಕೆ ಅನುಗುಣವಾಗಿ ವೇತನವನ್ನು ಪಡೆಯುವರು.

To Download the News Paper notification

Comments