ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 1805 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 1805 ಚೀಫ್ ಇಂಜಿನಿಯರ್, ಜಾಯಿಂಟ್ ಡೈರೆಕ್ಟರ್ (ಸ್ಟ್ಯಾಟಿಸ್ಟಿಕ್ಸ್), ಎಸ್ಎಕ್ಯುಟಿವ್ ಇಂಜಿನಿಯರ್, ಅಕೌಂಟ್ಸ್ಆ ಫೀಸರ್, ಸುಪರಿಂಟೆಂಡೆಂಟ್, ಜೂನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಸ್ಟ್ಯಾಟಿಸ್ಟಿಕಲ್ ಆಫೀಸರ್, ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಮತ್ತು ಸೆಕೆಂಡ್ ಡಿವಿಷನ್ ಅಕೌಂಟ್ಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ,
ಕೊಠಡಿ ಸಂಖ್ಯೆ.208, 2ನೇ ಮಹಡಿ, ಅಂಬೇಡ್ಕರ್ ವೀಧಿ, ವಿಕಾಸ ಸೌಧ, ಬೆಂಗಳೂರು - 560001
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC, PUC, ಡಿಪ್ಲೊಮಾ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಪದವಿಯನ್ನು ಪೂರ್ಣಗೊಳಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 21 ವರ್ಷ ವಯೋಮಿತಿಯನ್ನು ತಲುಪಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 27,000/- ರೂ ಗಳಿಂದ 1,97,200/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments