Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG
Published by: Basavaraj Halli | Date:9 ಮಾರ್ಚ್ 2020
not found
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ Cluster Facitiation Project ಅಡಿಯಲ್ಲಿ ಕಾರ್ಯನಿರ್ವಹಿಸಲು ಪರಿಣತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ, ನೇಮಕಾತಿ ಅರ್ಹತೆ, ಮತ್ತು ಷರತ್ತುಗಳು, ಸಂಭಾವನೆ ಇತ್ಯಾದಿ ವಿವರಗಳನ್ನೊಳಗೊಂಡ ವಿವರವಾದ ಅಧಿಸೂಚನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: 20-03-2020.
ನಿಗದಿಪಡಿಸಿದ ದಿನಾಂಕದ ನಂತರ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರವೇ ಸಲ್ಲಿಸತಕ್ಕದ್ದು ಮತ್ತು ಆಯುಕ್ತಾಲಯದಲ್ಲಿ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಆಡಳಿತ) ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ (ದೂರವಾಣಿ : 080 -22342163) ಅವರನ್ನು ಸಂಪರ್ಕಿಸಬಹುದಾಗಿದೆ.
ಅಥವಾ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
"ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ"
2 ನೇ ಮಹಡಿ, 3 ನೇ ಹಂತ, ಕೊಠಡಿ ಸಂಖ್ಯೆ: 219 ,
ಬಹುಮಹಡಿಗಳ ಕಟ್ಟಡ,
ಬೆಂಗಳೂರು -560001
ದೂರವಾಣಿ :080 -22372738,
ಇ-ಮೇಲ್ : karnregs@gmall.com
Application Start Date:  9 ಮಾರ್ಚ್ 2020
Application End Date:  20 ಮಾರ್ಚ್ 2020
Work Location:  ಕರ್ನಾಟಕ
to download official notification

Comments

Arun Kumar ಮಾರ್ಚ್ 17, 2020, 6:45 ಅಪರಾಹ್ನ