ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗದಲ್ಲಿ ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಅಸಿಸ್ಟೆಂಟ್ ಮ್ಯಾನೇಜರ್, ವಿವಿಧ ಅಧಿಕಾರಿ ಹುದ್ದೆಗಳು ಸೇರಿದಂತೆ ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಈ ಕೆಳಗಿನ ಕಚೇರಿ ವಿಳಾಸಕ್ಕೆ ದಿನಾಂಕ : 06-12-2021ರ ಸಂಜೆ 5:30ರೊಳಗೆ ಅರ್ಜಿ ತಲುಪಿಸಲು ಅವಕಾಶ ಕಲ್ಪಿಸಲಾಗಿದೆ.
ಕಚೇರಿ ವಿಳಾಸ :
ವ್ಯವಸ್ಥಾಪ ನಿರ್ದೇಶಕರು,
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ,
ಸಂಘಗಳ ಒಕ್ಕೂಟ ನಿಯಮಿತ ಫ್ಲಾಟ್ ಸಂಖ್ಯೆ: 74/ಎ,
ಕೆಳಗೋಟೆ ಇಂಡಸ್ಟ್ರಿಯಲ್ ಏರಿಯಾ, ಚಿತ್ರದುರ್ಗ-577501.
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ : 06-12-2021ರ ಅನ್ವಯ ಕನಿಷ್ಟ 18 ವರ್ಷ ದಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST/Cat-1ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments