ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಖಾಲಿ ಉಳಿದಿರುವ ಪೋಸ್ಟಲ್ / ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಗ್ರಾಮೀಣ ಡಾಕ್ ಸೇವಕರಿಂದ(GDS) ಅರ್ಜಿ ಆಹ್ವಾನ
| Date:15 ಜೂನ್ 2019

ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ 2015-16, 2016-17, 2017-18 ಮತ್ತು 2018 ನೇ ಸಾಲಿನಲ್ಲಿ ಖಾಲಿ ಉಳಿದಿರುವ ಪೋಸ್ಟಲ್ ಅಸಿಸ್ಟೆಂಟ್ ಅಥವಾ ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಗ್ರಾಮೀಣ ಡಾಕ್ ಸೇವಕರಿಂದ(GDS) ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 21,2019 ರೊಳಗೆ ಸಲ್ಲಿಸಬೇಕಿರುತ್ತದೆ. ಈ ಅಧಿಸೂಚನೆ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಳ್ಳಿ.
No. of posts: 101
Application Start Date: 15 ಜೂನ್ 2019
Application End Date: 21 ಜೂನ್ 2019
Work Location: ಕರ್ನಾಟಕ ಪೋಸ್ಟಲ್ ಸರ್ಕಲ್
Selection Procedure: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವದು
Qualification: 10+2ಅಥವಾ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ಬಗ್ಗೆ ಯಾವುದೇ ಮಾಹಿತಿ ಅಧಿಸೂಚನೆಯಲ್ಲಿರುವದಿಲ್ಲ ಹಾಗಾಗಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅಗತ್ಯವಿಲ್ಲ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯೋಮಿತಿ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 33 ವರ್ಷ ಗರಿಷ್ಠ ವಯೋಮಿತಿ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.





Comments