Loading..!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PG
Published by: Hanamant Katteppanavar | Date:11 ಜನವರಿ 2021
not found

ಗ್ರಾಮೀಣ ಕುಡಿಯುವ ನೀರು ಮತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಚ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲಾ ಕಚೇರಿಗಳಲ್ಲಿ ಖಾಲಿ ಇರುವ 30 ಸಮಾಲೋಚಕರ ಹುದ್ದೆಗಳ ತಾತ್ಕಾಲಿಕ /ಹೊರಗುತ್ತಿಗೆ ಆಧಾರದ ನೇಮಕಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜನವರಿ 11, 2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

No. of posts:  30
Application Start Date:  25 ಡಿಸೆಂಬರ್ 2020
Application End Date:  11 ಜನವರಿ 2021
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿ , ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳು ಎಂ.ಎಸ್.ಡಬ್ಲ್ಯೂ, ಎಂಸಿಎ, ಎಂ.ಎ, ಗ್ರಾಮೀಣಾಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಬಿ.ಇ, ಪತ್ರಿಕೋದ್ಯಮ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಯಾವುದೇ ಹುದ್ದೆಯಲ್ಲಿ ಕನಿಷ್ಠ 3- 8 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
Age Limit:
ಅಭ್ಯರ್ಥಿಗಳು ದಿನಾಂಕ 11-01-2021 ಕ್ಕೆ ಅನ್ವಯಿಸುವಂತೆ ಗರಿಷ್ಠ- 45 ವರ್ಷಗಳನ್ನು ಮೀರಿರಬಾರದು.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 22,000/- ದಿಂದ 60,000/- ರೂ ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ  ಪಡೆದುಕೊಂಡು ಭರ್ತಿ ಮಾಡಿ ತದನಂತರ ಎಲ್ಲಾ ಮೂಲ ದಾಖಲೆಗಳೊಂದಿಗೆ ಅರ್ಜಿಯನ್ನು ಈ ಕೆಳಗೆ ನೀಡಿದ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ತಲುಪುವಂತೆ ಸಲ್ಲಿಸಬೇಕು.

ಗೆ,
ಆಯುಕ್ತರು, 
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 
2ನೇ ಮಹಡಿ, ಕೆ ಹೆಚ್ ಬಿ ಕಟ್ಟಡ,
ಕಾವೇರಿ ಭವನ, 
ಕೆ ಜಿ ರಸ್ತೆ, ಬೆಂಗಳೂರು- 560009 ಕ್ಕೆ 11-01-2021 ರ ಒಳಗೆ ಸಲ್ಲಿಸಬೇಕು.

* ರಾಜ್ಯ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ
* ಜಿಲ್ಲಾ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ 
To Download the official notification

Comments

Shanthkumar Nandi ಜನ. 2, 2021, 7:59 ಅಪರಾಹ್ನ