ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ 155 ಸಂಗ್ರಹಣೆ ಸಲಹೆಗಾರ, ಮಾನಿಟರಿಂಗ್ ಮತ್ತು ಮೌಲ್ಯಮಾಪನ (ಎಂ & ಇ) ಸಲಹೆಗಾರ, ಮತ್ತು ಪರಿಸರ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 04/11/2023 ದೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 155
ಸಂಗ್ರಹಣೆ ಸಲಹೆಗಾರ - 31
ಮಾನಿಟರಿಂಗ್ ಮತ್ತು ಮೌಲ್ಯಮಾಪನ (ಎಂ & ಇ) ಸಲಹೆಗಾರ - 31
ಪರಿಸರ ಸಲಹೆಗಾರ - 31
ಸಾಮಾಜಿಕ ಅಭಿವೃದ್ಧಿ ಸಲಹೆಗಾರ - 31
ಹಣಕಾಸು ಸಲಹೆಗಾರ - 31
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE / B.Tech, BCA, M.Tech, MSW/ MA or MBA (Finance) ವಿದ್ಯಾರ್ಹತೆಯನ್ನು ಕರ್ನಾಟಕ ರಾಜ್ಯದಿಂದ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ರೂಗಳಿಂದ 75,000/- ರೂವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments